ಮಂಗಳೂರು (ಬೆಳ್ತಂಗಡಿ): ಬ್ಲಾಕ್ ಕಾಂಗ್ರೆಸ್ ವತಿಯಿದ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ತಾಲೂಕು ಆಡಳಿತದಿಂದ ಬೆಳ್ತಂಗಡಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ, ಕೇವಲ ಶಾಂತಿಯಿಂದ ಚರಕ ತಿರುಗಿಸುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಬಂದಿಲ್ಲ ಎಂದು ಸರಕಾರದ ಅಧಿಕೃತ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಕುರಿತು ಅವಹೇಳನಕಾರಿ ಭಾಷಣ ಮಾಡಿರುವುದು ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ಕಂದಕವನ್ನು ಸೃಷ್ಟಿ ಮಾಡಿ, ನೆಮ್ಮದಿ ಮತ್ತು ಶಾಂತಿಯನ್ನು ಕದಡುವ ಪ್ರಯತ್ನವಾಗಿರುತ್ತದೆ ಎಂದು ಆರೋಪಿಸಿರುವ ಬ್ಲಾಕ್ ಕಾಂಗ್ರೆಸ್ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬೆಳ್ತಂಗಡಿ ಠಾಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ ನಾಗೇಶ್ ಕುಮಾರ್ ಗೌಡ ದೂರು ದಾಖಲಿಸಿದ್ದಾರೆ.