ತುಂಗಭದ್ರಾ ಜಲಾಶಯದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ

ಮಂಗಳೂರು(ಕೊಪ್ಪಳ):  ಭಾರೀ ಆತಂಕಕ್ಕೆ ಕಾರಣವಾಗಿದ್ದ ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19ರ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿಯಾಗಿದೆ.

ತುಂಗಾಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ನ ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಆ.16ರಂದು ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಅಡ್ಡಿಯಾಗಿದ್ದ ಸ್ಕೈವಾಕ್ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ.

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದ್ದರಿಂದ ಇದರಿಂದ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ರೈತರು ನಿಟ್ಟುಸಿರು ಬಿಡುವಂತಾಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

https://youtu.be/otF0BYBZICE

LEAVE A REPLY

Please enter your comment!
Please enter your name here