ಸಿಎಂ ಜೊತೆಗೆ ಎಸ್ ಬಿ ಐ, ಪಂಜಾಬ್ ಬ್ಯಾಂಕ್ ಗಳ ಸಂಧಾನ ಸಭೆ ಯಶಸ್ವಿ

ಮಂಗಳೂರು (ಬೆಂಗಳೂರು): ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿನ ಖಾತೆಗಳನ್ನ ಸ್ಥಗಿತಗೊಳಿಸುವ ಆದೇಶವನ್ನು ಸರ್ಕಾರ ತಾತ್ಕಾಲಿಕ ತಡೆ ಹಿಡಿದಿದೆ. ಬ್ಯಾಂಕ್ ಅಧಿಕಾರಿಗಳ ಮನವಿ ಮಾಡಿದ ಬೆನ್ನಲ್ಲೇ ಸರ್ಕಾರ ತನ್ನ ನಿರ್ಧಾರಕ್ಕೆ ತಾತ್ಕಾಲಿಕ ತಡೆ ನೀಡಿದೆ.

ಕರ್ನಾಟಕ ರಾಜ್ಯ ಸರಕಾರಕ್ಕೆ ಸಂಬಂಧಪಟ್ಟ ಎಲ್ಲಾ ಇಲಾಖೆ, ಸಂಸ್ಥೆಗಳು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ)ನ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎನ್ನುವ ಆದೇಶಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ಹಿಡಿದಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ ಎರಡೂ ಬ್ಯಾಂಕ್ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಐಎಡಿಬಿ ಸಂಸ್ಥೆಯ ನಿಶ್ಚಿತ ಠೇವಣಿಯನ್ನು ಮರುಪಾವತಿಸುವ ಕುರಿತು ಸಮಯಾವಕಾಶವನ್ನು ಕೋರಿದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ಆದೇಶವನ್ನು ತಡೆ ಹಿಡಿದಿದೆ.

ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ವಿಶ್ವವಿದ್ಯಾಲಯಗಳು, ಮತ್ತಿತರ ಸಂಸ್ಥೆಗಳು ಮಾಡಿರುವ ಎಲ್ಲಾ ರೀತಿಯ ಠೇವಣಿಗಳನ್ನು/ಹೂಡಿಕೆಗಳನ್ನು ತಕ್ಷಣದಿಂದ ಹಿಂಪಡೆಯುವಂತೆ ಹಾಗೂ ಇನ್ನು ಮುಂದೆ ಈ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳನ್ನು/ ಹೂಡಿಕೆಗಳನ್ನು ಮಾಡಬಾರದು ಎಂದು ಸುತ್ತೋಲೆಯಲ್ಲಿ ಆದೇಶಿಸಲಾಗಿತ್ತು.

LEAVE A REPLY

Please enter your comment!
Please enter your name here