ಹಳೆಯ ಪಿಂಚಣಿ ಯೋಜನೆ ಜಾರಿಗೆ ಚಿಂತನೆ – ಸರ್ಕಾರದಿಂದ ಸಮಿತಿ ರಚನೆ

ಮಂಗಳೂರು(ಬೆಂಗಳೂರು):  ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕದ ಸರ್ಕಾರಿ ನೌಕರರು ಒತ್ತಾಯದ ಬೆನ್ನಲ್ಲೇ ಇಂದು ಓಪಿಎಸ್ ಜಾರಿ ಮಾಡಲು ಸರ್ಕಾರ ಸಮಿತಿ ರಚನೆ ಮಾಡಿದೆ.

ಕರ್ನಾಟಕ ರಾಜ್ಯದಲ್ಲಿ ದಿನಾಂಕ 1/4/2006ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ ಆಗಬೇಕಾದ ಮಾರ್ಪಾಡುಗಳು, ಈಗಿರುವ ರಚನಾ ವ್ಯವಸ್ಥೆಯಲ್ಲಿ ಮಾಡಬಹುದಾದ ಬದಲಾವಣೆ ಕುರಿತು ಪರಿಶೀಲಿಸಲು ಐವರು ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ.

ಈ ಸಮಿತಿಯು ರಾಷ್ಟ್ರೀಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವ ನಿರ್ಧಾರಗಳನ್ನು ಸೂಕ್ತ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here