ಮಂಗಳೂರು(ಕೊಚ್ಚಿ): ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವಿನ ರೋಗಲಕ್ಷಣಗಳಿಂದಾಗಿ ಹಿರಿಯ ನಟ ಮೋಹನ್ ಲಾಲ್ ಅವರನ್ನು ಕೊಚ್ಚಿಯ ಅಮೃತಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ಜ್ವರ ಹಾಗೂ ಉಸಿರಾಟದ ಸೋಂಕು ಇದೆ ಎಂದು ಹೇಳಲಾಗಿದೆ.
ಗುಜರಾತ್ನಲ್ಲಿ ಎಲ್2 ಎಂಬುರಾನ್ ಸಿನಿಮಾದ ಶೂಟಿಂಗ್ ಮಾಡುತ್ತಿದ್ದ ವೇಳೆ ಜ್ವರ ಕಾಣಿಸಿಕೊಂಡಿದ್ದು ಕೊಚ್ಚಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋಹನ್ ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾದ ಸುದ್ದಿ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ. ಆಸ್ಪತ್ರೆಯ ವೈದ್ಯರು ಮೋಹಲ್ ಲಾಲ್ ಆರೋಗ್ಯದ ಕುರಿತು ಮಾಹಿತಿ ನೀಡಿದ್ದು,
ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಮುಂದಿನ ಕೆಲ ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಮೋಹನ್‌ಲಾಲ್‌ಗೆ ಸಲಹೆ ನೀಡಿದ್ದಾರೆ.