ಮಂಗಳೂರು: ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಪಕ್ಷಪಾತಿ ನಡೆ ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು (ಆ.19) ಬೆಳಿಗ್ಗೆ ಮಂಗಳೂರಿನ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಲಾಲ್‌ಭಾಗ್‌ನ ಮಂಗಳೂರು ಮಹಾನಗರ ಪಾಲಿಕೆ ಕಚೇರಿವರೆಗೆ ಪಾದಯಾತ್ರೆ ನಡೆಯಿತು. ಆ ಬಳಿಕ ಮನಪಾ ಕಛೇರಿ ಮುಂಭಾಗದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನಾ ಸಭೆ ನಡೆಯಿತು.
ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಟಯರ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಖಾಸಗಿ ಬಸ್ಸೊಂದರ ಮೇಲೆ ಕಲ್ಲು ತೂರಾಟ ನಡೆಯಿತು.