ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ-ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಆ.21ರ ರಾತ್ರಿ ನಡೆದಿದೆ. ಬೈಕ್ ನಲ್ಲಿ ಬಂದ  ಐದರಿಂದ ಆರುಮಂದಿಯ  ತಂಡ  ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ನಗರದ ವೆಲೆನ್ಸಿಯಾದಲ್ಲಿರುವ ಐವಾನ್ ಡಿಸೋಜರ ಮನೆ ಬಳಿಗೆ ಬಂದ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.

ಕಲ್ಲು ತೂರಾಟದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ  ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಲಾಗಿದೆ. , ಸಿಸಿ ಕ್ಯಾಮೆರಾ ಪರಿಶೀಲನೆ  ನಡೆಸಲಾಗಿದ್ದು, ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಐವನ್‌ ಡಿಸೋಜಾ ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸಲು ತೆರಳಿದ್ದರು ಎನ್ನಲಾಗಿದೆ.

 

LEAVE A REPLY

Please enter your comment!
Please enter your name here