ಇ-ಆಟೋ ರಿಕ್ಷಾ ಸಂಚಾರಕ್ಕೆ ಕೇಂದ್ರದ ಮಾರ್ಗ ಸೂಚಿಯಂತೆ ಆದೇಶ: ಜಿಲ್ಲಾಧಿಕಾರಿ ಸ್ಪಷ್ಟನೆ


ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಅಟೋ ಸಂಚಾರಕ್ಕೆ ಸಂಬಂಧಿಸಿ ಕೇಂದ್ರದ ಮಾರ್ಗಸೂಚಿ ಪ್ರಕಾರವೇ ಆದೇಶ ನೀಡಲಾಗಿದೆ. ಯಾವುದೇ ರೀತಿಯ ಏಕಪಕ್ಷೀಯ ನಿರ್ಧಾರ ಮಾಡಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ ನೀಡಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಆ ಕುರಿತಾದ ಸಂಪೂರ್ಣ ಮಾಹಿತಿಯ ವಿಡಿಯೋ ಇಲ್ಲಿದೆ.
ದಕ್ಷಿಣ ಕನ್ನಡದಲ್ಲಿ ಇ-ಆಟೊಗಳಿಗೆ ಪ್ರತ್ಯೇಕ ಅಥವಾ ವಿಶೇಷ ಆದೇಶ ಹೊರಡಿಸಿಲ್ಲ. ಮೋಟಾರು ವಾಹನ ಕಾಯಿದೆ 66 ಪ್ರಕಾರ ಎಲ್‌ಪಿಜಿ ಮತ್ತು ಸಿಎನ್‌ಜಿ ವಾಹನಗಳಿಗೆ ಪರವಾನಗಿ ನೀಡಲಾಗುತ್ತದೆ.
ಅವಿಭಜಿತ ದ.ಕ. ಜಿಲ್ಲೆಯಲ್ಲಿ 1993-94ರಲ್ಲಿ ಅಂದಿನ ಜಿಲ್ಲಾಧಿಕಾರಿಗಳು ವಾಹನಗಳ ಮಿತಿಯನ್ನು ನಿರ್ಬಂಧಿಸಲು
ಕಾಯ್ದೆಯ ಸೆಕ್ಷನ್ 115ರಡಿ ವಲಯ ಪರಿಕಲ್ಪನೆಯಡಿ ಆಟೋ ರಿಕ್ಷಾಗಳಿಗೆ ವಲಯ 1 (ನಗರ)ಹಾಗೂ ವಲಯ 2
(ಗ್ರಾಮಾಂತರ) ರಂತೆ ಪರವಾನಿಗೆ ನೀಡುವ ಅವಕಾಶ ಕಲ್ಪಿಸಿದ್ದರು. ಕೆಲ ವರ್ಷಗಳ ಹಿಂದೆ ಎಲೆಕ್ಟಿಕ್ ಆಟೋಗಳು
ರಸ್ತೆಗಿಳಿಯಲು ಆರಂಭವಾದಾಗ ಅದೇ ವಲಯ1-2 ನಿಯಮ ಇ-ಆಟೊಗಳಿಗೂ ಅನ್ವಯ ಮಾಡಲಾಗಿತ್ತು. ಇ-
ಆಟೊ ಗಳಿಗೆ ದ.ಕ.ದಲ್ಲಿ ಮಾತ್ರ ಈ ನಿರ್ಬಂಧ ಇದ್ದುದನ್ನು ಪ್ರಶ್ನಿಸಿ ಇ-ಆಟೊ ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು.

LEAVE A REPLY

Please enter your comment!
Please enter your name here