ವಿಟ್ಲ: ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ಕ್ರಿಯಾ ಯೋಜನೆ ತಯಾರಿಯ ಬಗ್ಗೆ ಪಂಚಾಯತ್ ಅಧ್ಯಕ್ಷರಾದ ಜಯಂತ ಪಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮ ಸಭೆ ನಡೆಯಿತು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ತಾಲೂಕು ಮಾಹಿತಿ ಸಂಯೋಜಕರಾದ ರಾಜೇಶ್ ರವರು ಹೊಸದಾಗಿ ಕೈಗೊಳ್ಳಬಹುದಾದ ಕಾಮಗಾರಿ ಹಾಗೂ ಮಾಹಿತಿಯನ್ನು ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಪಿ ರವರು ಮಾತನಾಡಿ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯು ಗ್ರಾಮಸ್ಥರಿಗೆ ಕಾಮಗಾರಿ ಕೈಗೊಳ್ಳಲು ಒಳ್ಳೆ ಯೋಜನೆಯಾಗಿದ್ದು ಮುಂದಿನ ದಿನಗಳಲ್ಲಿ ನೀರಿನ ಅಭಾವ ನಿಭಾಯಿಸಲು ಪ್ರತಿಯೊಬ್ಬರೂ ಈ ಯೋಜನೆಯಡಿಯಲ್ಲಿ ತೆರೆದ ಬಾವಿಯನ್ನು ನಿರ್ಮಿಸಲು ಮುಂದಾಗಬೇಕು ಅದಕ್ಕೆ ಗ್ರಾಮ ಪಂಚಾಯತ್ ಸಂಪೂರ್ಣ ಸಹಕಾರ ನೀಡಲಾಗುವುದೆಂದು ತಿಳಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀಶೈಲ ರವರು ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮಲತಾ ಹಾಗೂ ಸದಸ್ಯರಾದ ರವೀಶ್ ಶೆಟ್ಟಿ, ಅಮಿತ, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದರು.